Blog

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್

ವರದಿ ರಾಣಿ ಪ್ರಸನ್ನ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು. ಆಲೂರು ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಜಯ್ ಕುಮಾರ್ ಆಯ್ಕೆ.

ಹಾಸನದ ತಣ್ಣೀರುಹಳ್ಳ ಮಠದಲ್ಲಿ ನಡೆದ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 109 ನೇ ಜನ್ಮದಿನವನ್ನು ಆಚರಿಸಲಾಯಿತು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ತಣ್ಣಿರುಹಳ್ಳ ಮಠದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸಂಸ್ಥಾಪಕರಾದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಗಳ ೧೦೯ ನೇ ಜನ್ಮದಿನವನ್ನು ಆಚರಿಸಲಾಯಿತು. ಶರಣ ಸಾಹಿತ್ಯ ಪರಿಷತ್ತು ಒಂದು ಜಾತಿ,ಧರ್ಮಕ್ಕೆ ಸೀಮಿತವಲ್ಲ”  ಎಂದು ಹಾಸನ ತಣ್ಣೀರುಹಳ್ಳ ಶ್ರೀಮಠದ ಪರಮಪೂಜ್ಯ ಶ್ರೀ ಶ್ರೀ ವಿಜಯಕುಮಾರ ಸ್ವಾಮೀಜಿಗಳು ಹೇಳಿದರು.

ಹಾಸನ ನಗರದ ತಣ್ಣೀರುಹಳ್ಳಿ ಶ್ರೀ ಮಠದ ಅವರಣದಲ್ಲಿ ಪರಮಪೂಜ್ಯ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಗಳ ೧೦೯ ನೇ ಜನ್ಮದಿನ ಮತ್ತು ಸಂಸ್ಥಾಪನಾ ದಿನ ಹಾಗೂ ಶರಣ ಸಾಹಿತ್ಯ ಪರಿಷತ್ತು ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು ವಿಶ್ವ ಬಸವಣ್ಣ ಮಾನವ ಧರ್ಮವನ್ನು ಸಂರಕ್ಷಣೆ ಮಾಡಿದ ಮಹಾನ್ ಪುರುಷ, ಬಸವಾದಿ ಶರಣರು ಅಂದಿನ ಕಾಲದಲ್ಲಿ ಸಮಾಜದಲ್ಲಿ ಅಡಗಿದ ಅಸಮಾನತೆ ಮತ್ತು ಜಾತಿ-ಜಾತಿಗಳ  ಬಡಿದಾಟಗಳನ್ನು ಕಂಡು ಅನುಭವ ಮಂಟಪವನ್ನು ನಿರ್ಮಿಸಿ, ಸರ್ವರಿಗೂ ಸಮಾನತೆ ನೀಡುವ ಸ್ತ್ರೀ ಯರಿಗೆ ಸಮಾನತೆ ನೀಡಿ, ಹೆಣ್ಣಿಗೆ ದೈವತ್ವ ಸ್ಥಾನ ನೀಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ. ಅಲ್ಲದೆ ವಚನ ಕ್ರಾಂತಿ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆ ನೀಡಿದ ೧೨ ನೇ ಶತಮಾನದ ವಚನ ಸಾಹಿತ್ಯ ಮತ್ತು ಶರಣ ಸಂಸ್ಕೃತಿಯನ್ನು ಉಳಿಸಿ-ಬೆಳೆಸಬೇಕು ಎಂಬ ಹಂಬಲದಿಂದಲೇ ಸುತ್ತೂರಿನ ಪೂಜ್ಯ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಗಳು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸ್ಥಾಪನೆ ಮಾಡಿದ್ದಾರೆ.

ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಮನಾಥಪುರ ಎಂ.ಎನ್. ಕುಮಾರಸ್ವಾಮಿ ಮಾತನಾಡಿ ಈ ನಿಟ್ಟಿನಲ್ಲಿ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಗಳ ಸಂದೇಶಗಳಂತೆ ಸರ್ವರು ಪಾಲಿಸಬೇಕು ಎಂದು ಅವರು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆ ಇಡೀ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರದಲ್ಲಿ ನೂತನ ಅಧ್ಯಕ್ಷರ ನೇತೃತ್ವದಲ್ಲಿ ಉತ್ತಮವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಮುಂದಿನ ದಿನದಲ್ಲಿ ಇನ್ನು ಉತ್ತಮ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷರು ತೀರ್ಥಕುಮಾರಿವೆಂಕಟೇಶ್ ಬೇಲೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿದರು. ಉಳಿದಂತೆ ಕಾರ್ಯಕ್ರಮದಲ್ಲಿ ಪರಿಷತ್ತು, ಉಪಾಧ್ಯಕ್ಷರಾದ ನಂಜುಂಡಸ್ವಾಮಿ, ಕೋಶಾಧಿಕಾರಿ ರುದ್ರಸ್ವಾಮಿ, ಹಾಸನ ಅಧ್ಯಕ್ಷ ಪುಟ್ಟರಾಜು, ಅರಸೀಕೆರೆ ಅಧ್ಯಕ್ಷ ಶೇಖ‌ರ್, . ಅಲೂರು ಅಧ್ಯಕ್ಷ ವಿಜಯಕುಮಾ‌ರ್, ಚನ್ನರಾಯಪಟ್ಟಣ ಅಧ್ಯಕ್ಷ ಚಿರಂಜಿವಿ, ಸಕಲೇಪುರ ಅಧ್ಯಕ್ಷ by ಲೋಹಿತ್ ಕೌಡಲ್ಳ್ಳಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಚಂದನ್ ಕುಮಾರ್, ಕದಳಿ ವೇದಿಕೆ ಕಾರ್ಯದರ್ಶಿ ಸೌಭಾಗ್ಯ, ಮಹೇಶ್, ಪ್ರಸನ್ನ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.

Related posts

ಶುಭಾಶಯಗಳು

Bimba Prakashana

ಆಯುಧ ಪೂಜೆ ಹಾಗೂ ವಿಜಯ ದಶಮಿ

Bimba Prakashana

ಕನಕ ದಾಸ ಜಯಂತಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More