ಆಲೂರು: ವೀರಶೈವ ಸಮಾಜ ತುಳಿತಕ್ಕೆ ಒಳಗಾಗುತ್ತಿದ್ದು, ಸಮಾಜದ ಸಂಘಟನೆಗಳು ಸಂಘಟಿತರಾಗಿ ಸಮಾಜವನ್ನು ಮತ್ತಷ್ಟು ಮೇಲೆತ್ತುವ ಪ್ರಯತ್ನ ಮಾಡಬೇಕು ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಹೇಳಿದರು.
ಪಟ್ಟಣದ ಬಿ.ಎಂ ರಸ್ತೆಯಲ್ಲಿರುವ ತಾಲೂಕು ವೀರಶೈವ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ಇತ್ತೀಚಿಗೆ ನಡೆಯುತ್ತಿದ್ದು, ಇದಕ್ಕೆ ಅವಕಾಶ ನೀಡದೆ ಸಂಘಟನೆಗಳ ಮೂಲಕ ಮತ್ತಷ್ಟು ಸಮಾಜವನ್ನು ಬಲಪಡಿಸುವ ಪ್ರಯತ್ನ ಮಾಡಬೇಕು, ಸಮಾಜ ದೊಡ್ಡದೇ ಹೊರತು ಪಕ್ಷ ಅಲ್ಲ. ಇದೊಂದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಸಂಘವನ್ನು ಮತ್ತಷ್ಟು ಸಧೃಡಗೊಳಿಸುವ ಮೂಲಕ ಸಮಾಜದ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಬೇಕು. ಸಂಘದ ಬಲವರ್ಧನೆಗೆ ಪ್ರತಿಯೊಬ್ಬರು ಕೈಜೋಡಿಸಿ ನೂತನ ಅಧ್ಯಕ್ಷರೊಂದಿಗೆ ಕಾರ್ಯಕ್ರಮಗಳನ್ನು ರೂಪಿಸಿ ಸಂಘಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು.
ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು, ಪ್ರತಿಯೊಬ್ಬರೂ ಧರ್ಮ ಮಾರ್ಗದಲ್ಲಿ ನಡೆದಾಗ ಜೀವನದಲ್ಲಿ ಯಶಸ್ಸು ದೊರೆಯುತ್ತದೆ. ವೀರಶೈವ ಧರ್ಮಕ್ಕೆ ಪರಮಾಚಾರ್ಯರ ಕೊಡುಗೆ ಅಪಾರವಾಗಿದೆ. ಧಾರ್ಮಿಕ, ಸಾಂಸ್ಕೃತಿಕ ಶ್ರೀಮಂತಿಕೆ ಪಂಚಪೀಠಗಳ ಕೊಡುಗೆಯಾಗಿದೆ. ಧರ್ಮ ಜಾಗೃತಿ ಜೊತೆಗೆ ಸಾಮಾಜಿಕ ಸತ್ಕಾಂತಿ ಮಾಡಿದ ಕೀರ್ತಿ ಗುರು ಪರಂಪರೆಗೆ ಸಲ್ಲುತ್ತದೆ. ಪಂಚಪೀಠಗಳು ಆದಿಕಾಲದಿಂದಲೂ ಧರ್ಮ ರಕ್ಷಣೆ, ಸಾಮಾಜಿಕ ಸುಧಾರಣೆಗೆ ಮಾರ್ಗದರ್ಶನ ಮಾಡಿವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಜಿತ್ ಚಿಕ್ಕಕಣಗಾಲು ಹಾಗೂ 21 ಜನ ನಿರ್ದೇಶಕರುಗಳಿಗೆ ಪದಾಧಿಕಾರಿಗಳಿಗೆ ಸ್ವಾಮಿಜಿಗಳಿಂದ ಪದಗ್ರಹಣ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಸಂಕ್ಲಾಪುರ ಮಠದ ಪೀಠಾಧ್ಯಕ್ಷರಾದ ಶ್ರೀ ಧರ್ಮರಾಜೇಂದ್ರ ಸ್ವಾಮೀಜಿ, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿದ್ದೇಶ್ ನಾಗೇಂದ್ರ, ಹಾಸನ ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಪರಮೇಶ್, ಹಾಸನ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಬೇಲೂರು ತಾಲೂಕು ಅಧ್ಯಕ್ಷ ಬಸವರಾಜ್, ಚನ್ನರಾಯಪಟ್ಟಣ ತಾಲ್ಲೂಕು ಅಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಅಜಿತ್ ಚಿಕ್ಕಕಣಗಾಲು, ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ರೇಣುಕಾ ಪ್ರಸಾದ್, ಉಪಾಧ್ಯಕ್ಷ ಡಿ.ಎಸ್ ಜಯಣ್ಣ, ಪ್ರಧಾನ ಕಾರ್ಯದರ್ಶಿ ಎಸ್ ಎಸ್ ಶಿವಮೂರ್ತಿ, ಸಹ ಕಾರ್ಯದರ್ಶಿ ಡಾ. ಜಯರಾಜ್, ಖಜಾಂಚಿ ಟೀಕರಾಜ್, ವೀರಶೈವ ಸಮಾಜದ ಮುಖಂಡರಾದ ಕಬ್ಬಿನಹಳ್ಳಿ ಜಗದೀಶ್, ಶಾಂತಪ್ಪ, ಬಿಜೆಪಿ ತಾಲೂಕು ಅಧ್ಯಕ್ಷೆ ಉಮಾ ರವಿಪ್ರಕಾಶ್ ಸೇರಿದಂತೆ ಮುಂತಾದವರು ಹಾಜರಿದ್ದರು.
ಪೋಟೋ ಕ್ಯಾಪ್ಶನ್: ಪಟ್ಟಣದ ಬಿ.ಎಂ ರಸ್ತೆಯಲ್ಲಿರುವ ತಾಲೂಕು ವೀರಶೈವ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿನಿವೃತ್ತ ಪೊಲೀಸ್ ಮಹಾನಿರ್ದೇಶಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಉದ್ಘಾಟಿಸಿ ಮಾತನಾಡಿದರು.
previous post
next post