ವರದಿ ರಾಣಿ ಪ್ರಸನ್ನ
ಸಕಲೇಶಪುರ ತಾಲೂಕಿನ ಮಳಲಿ ಗ್ರಾಮದ ಸಮುದಾಯ ಭವನದಲ್ಲಿ ಇಮೇಜಿನ ಸ್ಕೂಲ್ ಆಫ್ ಆರ್ಟ್ಸ್ ಹಾಗೂ ಶ್ರೀ ವಿನಾಯಕ ಗೆಳೆಯರ ಬಳಗ ಆಡಳಿತ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಚಿಣ್ಣರ ಕಲಾ ಪ್ರತಿಭೋತ್ಸವ ಹಾಗೂ ಚಿತ್ರಕಲೆ ಸ್ಪರ್ಧೆ ಯಶಸ್ವಿಯಾಗಿ ನಡೆಸಲಾಯಿತು .
ಎಲ್ ಕೆ ಜಿ ಮತ್ತು ಯು ಕೆ ಜಿ ಇಂದ 10 ನೇ ತರಗತಿ ಶಾಲಾ ಮಕ್ಕಳಿಗೆ ಪ್ರಥಮ ವರ್ಷದ ಚಿತ್ರಕಲಾ ಸ್ಪರ್ಧೆಯನ್ನು ಇಮೇಜಿನ್ ಸ್ಕೂಲ್ ಆಫ್ ಆರ್ಟ್ಸ್ ಮತ್ತು ಶ್ರೀ ವಿನಾಯಕ ಗೆಳೆಯರ ಬಳಗ ಮಳಲಿ, ಸಹಯೋಗದೊಂದಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ತೃತೀಯ , ಬಹುಮಾನ ನೀಡಿ ಗೌರವಿಸಲಾಯಿತು.
ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಇಮ್ಯಾಜಿನ್ ಸ್ಕೂಲ್ ಆಫ್ ಆರ್ಟ್ಸ್
ಚಿತ್ರಕಲಾ ಶಾಲೆಯ ಶಿಕ್ಷಕರಾದ ಲೋಕೇಶ್, ತೀರ್ಪುಗಾರರಾಗಿ ಸೌಮ್ಯ ಹಾಜರಿದ್ದರು, ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಹರೀಶ್, ಪೊಲೀಸ್ ಇಲಾಖೆ ಕೀರ್ತಿ, ಹಾಜರಿದ್ದರು.
ಶ್ರೀ ವಿನಾಯಕ ಗೆಳೆಯರ ಬಳಗ ಆಡಳಿತ ಮಂಡಳಿ ಅಧ್ಯಕ್ಷರಾದ ಧನ್ಯ ಕುಮಾರ್, ಕಾರ್ಯದರ್ಶಿಗಳಾದ ಕೀರ್ತಿ ಎಂ ಪಿ, ಖಜಾಂಚಿ ಧರಣಿಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್,ಹೇಮಂತ್, ವರುಣ ಕುಮಾರ್, ರೋಹಿತ್, ಮುರಳಿ, ಸೇರಿದಂತೆ ಇತರರು ಹಾಜರಿದ್ದು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಿ ಕೊಟ್ಟರು.