14/09/94 ರ ಶನಿವಾರ ವಲಯ ಮಟ್ಟದ ಪ್ರತಿಭಾ ಕಾರಂಜಿ. ಸರ್ಕಾರಿ ಪ್ರೌಢಶಾಲೆ ಹೊನ್ನೇನಹಳ್ಳಿ ಕೂಡಿಗೆ ಆಲೂರು ತಾಲೂಕು ಇಲ್ಲಿ ಬಹಳ ಅರ್ಥಪೂರ್ಣವಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಒಂಬತ್ತು ಶಾಲೆಯ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಊರಿನ ಗ್ರಾಮಸ್ಥರು ಪೋಷಕರು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಸೇರಿದ್ದರು.ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರದ ಸಿಮೆಂಟ್ ಮಂಜು ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಲೆಯ ಪರಿಸರವನ್ನು ವೀಕ್ಷಿಸಿ ಶಾಲೆಗೆ ಇನ್ನು ಹೆಚ್ಚಿನ ಸೌಕರ್ಯಗಳನ್ನು ಒದಗಿಸಿಕೊಡುವ ಬಗ್ಗೆ ಮಾತನಾಡಿದರು. ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮವಾಗಿ ಜರುಗುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಶಿಸ್ತು ಮತ್ತು ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ, ಮುಖ್ಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ರವರನ್ನು ಶಾಸಕರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಶಾಸಕರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹಂಚೂರು ಪಂಚಾಯಿತಿ ಅಧ್ಯಕ್ಷರಾದ ಪುಷ್ಪಾಕರ್ಣ, ಸದಸ್ಯರಾದ ದರ್ಶಿನಿ, ಮಾಜಿ ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿಯವರಾದ ಜಾವಗಲ್ ಪ್ರಸನ್ನ,ಶಾಲಾಭಿ ವೃದ್ಧಿ ಸಮಿತಿ ಅಧ್ಯಕ್ಷರಾದ ಲೋಕೇಶ್. ಸಿಆರ್‌ಪಿ ರವಿ ಭಾಗವಹಿಸಿದ್ದರು
