ವರದಿ ರಾಣಿ ಪ್ರಸನ್ನ
ಸಕಲೇಶಪುರದ ತಾಲ್ಲೂಕು ಪಂಚಾಯಿತಿಯಲ್ಲಿ ಉಚಿತ ಉಪಕರಣಗಳ ವಿತರಣಾ ಕಾರ್ಯಕ್ರಮ.
ಜಿಲ್ಲಾ ಪಂಚಾಯಿತಿ ಕೈಗಾರಿಕಾ ವಿಭಾಗದಿಂದ ವೃತ್ತಿಪರ ಕರಕುಶಲಕರ್ಮಿಗಳಿಗೆ ಉಚಿತ ಉಪಕರಣಗಳ ವಿತರಣಾ ಕಾರ್ಯಕ್ರಮ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಸೆ 30 ರಂದು ನಡೆಯಿತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆ ಅಡಿ 17 ಕೆಲಸಗಳಿಗೆ ಸೌಲತ್ತು ನೀಡಲು ಮುಂದಾಗಿದೆ ಈ ಯೋಜನೆಯ ಸದುಪಯೋಗವನ್ನು ಪಡೆದುಕೊಂಡು ಕುಶಲಕರ್ಮಿಗಳು ಆರ್ಥಿಕವಾಗಿ ಮುಂದುವರೆದು ಸಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದು ಶಾಸಕರಾದ ಸಿಮೆಂಟ್ ಮಂಜುರವರು ತಿಳಿಸಿದರು
ಕೈಗಳ ಮೂಲಕ ಅಥವಾ ಸಲಕರಣೆಗಳನ್ನು ಬಳಸಿ ಕಾರ್ಯ ನಿರ್ವಹಿಸುವ ಎಲ್ಲಾ ಕುಶಲ ಕರ್ಮಿಗಳೂ ಈ ಯೋಜನೆ ವ್ಯಾಪ್ತಿಗೆ ಬರುತ್ತಾರೆ. ಅದರಲ್ಲೂ ಸಾಂಪ್ರದಾಯಿಕ ಕೌಶಲ್ಯಗಳನ್ನು ಹೊಂದಿರುವ ಜನ ಸಮೂಹಕ್ಕೆ ನೆರವು ನೀಡೋದು ಈ ಯೋಜನೆಯ ಉದ್ದೇಶ.
ಯೋಜನೆಯ ಅಡಿ ಕರಕುಶಲ ಕರ್ಮಿಗಳಿಗೆ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ, ಸಾಲ, ಸಬ್ಸಿಡಿ ಸೇರಿದಂತೆ ಹಲವು ಅನುಕೂಲಗಳನ್ನು ಮಾಡಿಕೊಡುವ ಮೂಲಕ, ಅವರ ಉತ್ಪನ್ನಗಳಿಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಒದಗಿಸೋದು ಈ ಯೋಜನೆಯ ಉದ್ದೇಶವೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರವಿಪ್ರಸಾದ್, ಕೈಗಾರಿಕಾ ಇಲಾಖೆಯ ವಿಸ್ತರಣಾ ಅಧಿಕಾರಿ ಆನಂದ್, ಸಹಾಯಕ ಸೈಯದ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
previous post
next post