ನವೀನ್ ಬೈರಾ ಪುರ
ಆಲೂರು: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ತಾಲೂಕಿನ ಪಾಳ್ಯ ಹೋಬಳಿ ನಾಕಲಗೂಡು ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ನವರಾತ್ರಿ ಅಂಗವಾಗಿ ಇತಿಹಾಸ ಪ್ರಸಿದ್ಧ ಶ್ರೀ ದೇವಿರಮ್ಮ ದೇವಸ್ಥಾನದಲ್ಲಿ 9 ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಶುಕ್ರವಾರವ ವಿಜಯದಶಮಿ ಪ್ರಯುಕ್ತ ಗ್ರಾಮದ ಮಹಿಳೆಯರು ಹಾಗೂ ಹಿರಿಯರು ವಾದ್ಯಮೇಳದೊಂದಿಗೆ ಸಾಮೂಹಿಕವಾಗಿ ಬನ್ನಿ ಮಂಟಪದ ಬಳಿ ತೆರಳಿ ಬನಿ ಬನ್ನಿಗಿಡಕ್ಕೆ ಪೂಜೆ ಸಲ್ಲಿಸಿದರು ನಂತರ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೂಡು ಗುಂಡು ಹಾರಿಸುವ ಮೂಲಕ ಬನ್ನಿಯನ್ನು ಕತ್ತರಿಸಿದರು ಅ ಸಂದರ್ಭದಲ್ಲಿ ಎಲ್ಲರೂ ಬನ್ನಿ ವಿನಿಮಯ ಮಾಡಿಕೊಂಡು ಪರಸ್ಪರ ಶುಭ ಹಾರೈಸಿ ನಂತರ ಹಬ್ಬವನ್ನು ಆಚರಿಸಿದರು.
ತಾಲೂಕಿನ ಹಳೆ ಆಲೂರು ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನ, ಜನ್ನಾಪುರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸೇರಿದಂತೆ ವಿವಿಧೆಡೆ ಜನ ಶ್ರದ್ಧೆ–ಭಕ್ತಿಯಿಂದ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಆಚರಿಸಿದರು.