ಸಕಲೇಶಪುರದ ಆಯುಷ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಹಾಗೂ ತಪಾಸಣೆ ಸೌಲಭ್ಯವನ್ನು ಕೈ ಗೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಅಕ್ಟೋಬರ್ 24 ಗುರುವಾರ ಈ ವಿಶೇಷ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯ ಬಳಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ಈ ಸೌಲಭ್ಯ ಇದೆ.
ಪೈಲ್ಸ್, ಫಿಸ್ಟುಲ, ಫಿಷರ್ ಕಾಯಿಲೆಗಳಿಗೆ, ಮಂಡಿ ನೋವು ಹಾಗೂ ಚರ್ಮ ರೋಗಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯವಿರುತ್ತದೆ.
ಸಾರ್ವಜನಿಕರು ಇದರ ಸದುಪಯೋಗ ಪಡಿಸಿ ಕೊಳ್ಳಬೇಕು ಎಂದು ಅಲ್ಲಿನ ವೈದ್ಯರು ಮಾಹಿತಿ ತಿಳಿಸಿದ್ದಾರೆ.
previous post
next post