ಆಲೂರು: ದೇಶದಲ್ಲಿಯೇ ಅತಿ ದೊಡ್ಡ ಇತಿಹಾಸ ಹೊಂದಿರುವ ಮೊದಲು ಭಾಷೆ ಕನ್ನಡ, ಮೊದಲು ನಾಡು ಕರ್ನಾಟಕ ತನ್ನದೇ ಆದ ವೈಶಿಷ್ಟತ್ರ್ಯ ಹೊಂದಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ ಹೇಳಿದರು.
ಆಲೂರು ಪಟ್ಟಣದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನವೆಲ್ಲ ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ, ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.
ಪ್ರಧಾನ ಭಾಷಣಕಾರರಾಗಿ ಶಿಕ್ಷಕ ಪರಮೇಶ ಮಡಬಲು ಮಾತನಾಡಿ, ಇಂದು ಕರ್ನಾಟಕ ಏಕೀಕರಣಗೊಂಡ ದಿನ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಬಹಳ ವಿಶೇಷವಾದ ದಿನ. ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು. ಸ್ವಾತಂತ್ರ್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1 ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿoದ ಪ್ರತಿ ವರ್ಷ ನವೆಂಬರ್ 1 ರಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು
ಕಾರ್ಯಕ್ರಮದಲ್ಲಿ ತಸಿಲ್ದಾರ್ ನಂದಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಮಲ್ಲೇಶ್, ಜೆಡಿಎಸ್ ಅಧ್ಯಕ್ಷ ಮಂಜೇಗೌಡ, ಬಿಜೆಪಿ ಅಧ್ಯಕ್ಷ ಉಮಾ, ವೀರಶೈವ ಮುಖಂಡರಾದ ಜಯಣ್ಣ, ಡಾ.ಜಯರಾಜ್, ದಲಿತ ಮುಖಂಡರಾದ ಬಸವರಾಜ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋಪಾಲಕೃಷ್ಣ, ಕರವೇ ತಾಲೂಕು ಅಧ್ಯಕ್ಷ ನಟರಾಜ್, ಉಪಾಧ್ಯಕ್ಷ ನವೀನ್ ಬೈರಾಪುರ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.
next post