ವರದಿ ರಾಣಿ ಪ್ರಸನ್ನ
ಹೆಬ್ಬಸಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ನೇತ್ರಾವತಿ ಮೇಘರಾಜ್ ಅವರು ಅವಿರೋಧ ಆಯ್ಕೆ
ಸಕಲೇಶಪುರ ತಾಲ್ಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇತ್ರಾವತಿ ಮೇಘರಾಜ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರನ್ ಅವರು ಅವಿರೋಧವಾಗಿ ನೇತ್ರಾವತಿ ಮೇಘರಾಜ್ ಅವರು ಆಯ್ಕೆ ಆಗಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳು, ಪೀ ಡಿ ಓ ಗಿರೀಶ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.