ಆಲೂರು: ಇಂದಿನ ಮಕ್ಕಳು ದೇಶದ ಭವಿಷ್ಯ. ಮಕ್ಕಳು ಸನ್ನಡತೆಯನ್ನು ಕಲಿತು ದೇಶ ಪ್ರಗತಿ ಪಥದಲ್ಲಿ ಸಾಗಲು ಕಾರಣಕರ್ತರಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ ತಿಳಿಸಿದರು.
ತಾಲೂಕಿನ ಕುಂದೂರು ಹೋಬಳಿ ಕೊಂದೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪಂಡಿತ ಜವಹರಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನವಾಗಿ ಆಚರಿಸಲಾಗುತ್ತಿದೆ ಎಂದರು. ಮಕ್ಕಳನ್ನು ಪ್ರೀತಿ, ಅಭಿಮಾನದಿಂದ ನೋಡುವ ಮೂಲಕ ಅವರ ವರ್ತನೆಯಲ್ಲಿ ಬದಲಾವಣೆ ತರಬಹುದು. ಅವರ ಅಭಿರುಚಿಗೆ ಅನುಗುಣವಾಗಿ ಪತ್ಯೇತರ ಚಟುವಟಿಕೆಗಳಲ್ಲಿ ಉತ್ತೇಜನ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಕುಂದೂರು ಶಾಲೆಯ ವಿದ್ಯಾರ್ಥಿ ಭವ್ಯ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನ ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಪರಿವೀಕ್ಷಕ ಗೋವಿಂದೇಗೌಡ, ಸಿ.ಆರ್.ಪಿ ದಿವಾಕರ್, ಬಿ.ಆರ್.ಸಿ ಚಂದ್ರಶೇಖರ್, ಮುಖ್ಯ ಶಿಕ್ಷಕಿ ನಳಿನಿ ಸೇರಿದಂತೆ ಶಾಲಾ ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
previous post
next post