ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದ ಪ್ರಯುಕ್ತ ಸಕಲೇಶಪುರ ತಹಶೀಲ್ದಾರ್ ಅವರ ಕಛೇರಿಯ ಎದುರು ಇರುವ ಡಾ: ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂಚಲ ಕುಮಾರ ಸ್ವಾಮಿಯವರು ಅವರೊಂದಿಗೆ ಇದ್ದರು.
ಇಂದು ಸಕಲೇಶಪುರ ತಾಲೂಕಿನ ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಎಲ್ಲಾ ಜನಪರ,ದಲಿತಪರ ಸಂಘಟನೆಗಳ ಮುಖ್ಯಸ್ಥರು ಮತ್ತು ಪದಾಧಿಕಾರಿಗಳು ಎಲ್ಲಾ ಜನಪ್ರತಿನಿಧಿಗಳು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗು ವಿದ್ಯಾರ್ಥಿಗಳು ಇಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.


