ವರದಿ ರಾಣಿ ಪ್ರಸನ್ನ
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸುಂಕ ವಸೂಲಿ ಖಂಡಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು
ಆಲೂರು ತಾಲ್ಲೂಕಿನ, ಚೌಲಗೆರೆ ಬಳಿ ಹಲವು ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಟೋಲ್ ಸಂಗ್ರಹ ನಿಲ್ಲಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು.
ರಸ್ತೆ ಸಮರ್ಪಕವಾಗಿ ಇಲ್ಲದಿದ್ದರೂ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಇದು ಖಂಡನೀಯ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ನಿಯಮಾವಳಿ ಪ್ರಕಾರ ಪ್ರತಿ 50ರಿಂದ 60 ಕಿಮೀ ಅಂತರದಲ್ಲಿ ಸುಂಕ ವಸೂಲಿ ಕೇಂದ್ರ ಇರಬೇಕು. ಶಾಂತಿಗ್ರಾಮ ಸುಂಕ ವಸೂಲಿ ಕೇಂದ್ರಕ್ಕೂ ಆಲೂರು ತಾಲೂಕು ಚೌಲಗೆರೆ ಬಳಿಯ ಟೋಲ್‌ಗೂ ಕೇವಲ 30 ಕಿಮೀ ದೂರ ಇದೆ ನಿಯಮ ಮೀರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು.
ಯೋಜನಾ ನಿರ್ದೇಶಕರು ಟೋಲ್ ಸಂಗ್ರಹ ನಿಲ್ಲಿಸಲು ಸಾಧ್ಯವಿಲ್ಲ. ಎಲ್ಲದ್ದಕ್ಕೂ ಪಿಡಿ ಬರಲು ಆಗಲ್ಲ. ನಮ್ಮ ಕೆಳಗಿನ ಸಿಬ್ಬಂದಿಗಳನ್ನು ಕಳುಹಿಸುತ್ತೇನೆ. ಅವರು ಬಂದು ಸಭೆ ಮಾಡುತ್ತಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ
ಪಿಡಿ ಪ್ರವೀಣ್ ಕುಮಾರ್ ಮೇಲೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ನಂತರ ಸ್ಥಳಕ್ಕೆ ಆಗಮಿಸಿದ ಎಸಿ ಶೃತಿ ಅವರು ಪ್ರತಿಭಟನಾಕಾರರನ್ನು ಮನವೊಲಿಸಿದರು. ಸ್ಥಳೀಯದಿಂದ ಸುಂಕ ವಸೂಲಿ ಇಂದು ಮಾಡುವುದಿಲ್ಲ. ನಾಳೆಯ ಸಭೆಯ ನಂತರ ತೀರ್ಮಾನ ಮಾಡಲಾಗುವುದು ಎಂದು ಹೇಳಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ನಾಳೆ ಬೆಳಿಗ್ಗೆ 11 ಗಂಟೆಗೆ ಹಾಸನದಲ್ಲಿ ಡಿಸಿ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ ಸಭೆಯಲ್ಲಿ ಯೋಜನಾ ನಿರ್ದೇಶಕರು, ಸ್ಥಳೀಯರು ಭಾಗಿಯಾಗಲಿದ್ದಾರೆ. ನಾಳೆ ನಡೆಯುವ ಸಭೆಯಲ್ಲಿ ಕ್ಯಾಬಿನೆಟ್ ನಲ್ಲಿ ಆಗಿರುವ ತೀರ್ಮಾನದ ಬಗ್ಗೆ ತಿಳಿಸಲಾಗುವುದು.ಮುಂದಿನ ನಿರ್ಧಾರದ ಬಗ್ಗೆ ನಾಳೆ ತೀರ್ಮಾನ ಕೈಗೊಳ್ಳಲಾಗುವುದು. ಇದಕ್ಕೆ ಪ್ರತಿಭಟನಾಕಾರರು ಒಪ್ಪಿದ್ದು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದರು. ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್ ಮಾತನಾಡಿ ಎಸಿ ಹಾಗೂ ಪಿಡಿ ಮನವಿಗೆ ಒಪ್ಪಿ ಪ್ರತಿಭಟನೆ ಹಿಂಪಡೆದಿದ್ದೇವೆ. ನಾಳೆ ಸಭೆಯಲ್ಲಿ ನಾವು, ಸ್ಥಳೀಯರು ಭಾಗವಹಿಸುತ್ತೇವೆ.ಯಾವುದೇ ಕಾರಣಕ್ಕೂ ಸ್ಥಳೀಯರಿಂದ ಸುಂಕ ವಸೂಲಿ ಮಾಡಬಾರದು.ನಾಳೆ ಜಿಲ್ಲಾಧಿಕಾರಿಗಳ ಮುಂದೆಯೂ ನಮ್ಮ ಬೇಡಿಕೆ ಇಡುತ್ತೇವೆ. ಬೇಡಿಕೆ ಈಡೇರದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ ಎಂದರು.
previous post
next post