*ಹೆತ್ತೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನುಡಿ ನಮನ*
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದಲ್ಲಿ ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥಶಾಸ್ತ್ರಜ್ಞ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚನೆಯ ಭಾಗವಾಗಿ *ನುಡಿ ನಮನ* ಕಾರ್ಯಕ್ರಮ ನಡೆಸಲಾಯಿತು. ಶ್ರೀಯುತರ ಜೀವನ ಮತ್ತು ಕೊಡುಗೆಗಳ ಕುರಿತು ವಿದ್ಯಾರ್ಥಿನಿ ಕು. ಸಾನಿಕ ಪ್ರಬಂದ ಮಂಡಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶೋಭ ಅವರು ಕಾರ್ಯಕ್ರಮ ಸಂಘಟಿಸಿದ್ದರು. ಮನಮೋಹನ್ ಸಿಂಗ್ ರವರ ಕುರಿತು ಡಾಕ್ಯುಮೆಂಟರಿಯನ್ನು ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಮಂಜುನಾಥ ಬಿ.ಡಿ. ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
previous post
next post