ವರದಿ ರಾಣಿ ಪ್ರಸನ್ನ
ಸಕಲೇಶಪುರ: ಕಾಫಿ ಬೆಳೆಗಾರರಿಗೆ ನೆರವು ಹಾಗೂ ಮಲೆನಾಡಿನಲ್ಲಿ ಹೆಚ್ಚಿರುವ ಕಾಡಾನೆಗಳ ಹಾವಳಿ ನಿಯಂತ್ರಣ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತೇನೆ ಎಂದು ಸಂಸದ ಶ್ರೇಯಸ್ ಪಟೇಲ್ ಭರವಸೆ ನೀಡಿದರು.
ಮಾರನಹಳ್ಳಿ ನಡುವಿನ ಚತುಷ್ಪಥ ಕಾಮಗಾರಿ ಪೂರ್ಣಗೊಳಿಸಲು ಜೂನ್ 30ರ ಗಡುವು ನೀಡಿದ್ದು ಈ ಬಗ್ಗೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹಾಸನಮಾರನಹಳ್ಳಿ ನಡುವಿನ ಚತುಷ್ಪಥ ಕಾಮಗಾರಿ ಗುತ್ತಿಗೆದಾರರ ಸಮಸ್ಯೆಯಿಂದ ತಡವಾಗಿದೆ. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೂ ಸಹ ಗುತ್ತಿಗೆದಾರರು ಹಾಗು ಹೆದ್ದಾರಿ ಪ್ರಾಧಿಕಾರಕ್ಕೆ ಗಡುವು ನೀಡಿದ್ದಾರೆ. ಜೂನ್ 30ರ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಿದೆ
ಪಟ್ಟಣದ ತಾಲ್ಲೂಕು ಕಚೇರಿ, ಕ್ರಾಫರ್ಡ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಭಾರತದ ಕಾಫಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಬೆಳೆಗಾರರೊಂದಿಗೆ ಕೈಜೋಡಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕಾಫಿ ಬೆಳೆಯಲು ಮುಂದೆ ಬಂದಿದ್ದಾರೆ. ಅವರಿಗೆ ಉತ್ಸಾಹ ತುಂಬುವ ಕೆಲಸ ಸರ್ಕಾರದ ಮಟ್ಟದಲ್ಲಿ ಆಗಬೇಕಾಗಿದೆ. ಯುವಕರು ನವೋದ್ಯಮ ಪ್ರಾರಂಭಿಸಿ, ಸ್ವಂತ ಬ್ರಾಂಡ್‌ಗಳ ಮೂಲಕ ಕಾಫಿಗೆ ಮಾರುಕಟ್ಟೆ ಹೆಚ್ಚಿಸುವ ಉತ್ಸಾಹದಲ್ಲಿದ್ದು, ಆರ್ಥಿಕ ಹಾಗು ಇನ್ನಿತರ ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.