ವರದಿ ರಾಣಿ ಪ್ರಸನ್ನ
ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿಯೇ ವ್ಯವಹಾರಿಕ ಜ್ಞಾನ ಗಳಿಸಬೇಕು ಈಗಿನ ಮಕ್ಕಳು ವ್ಯವಹಾರ ಜ್ಞಾನ ಬೆಳೆಸಿಕೊಳ್ಳುವುದಕ್ಕಿಂತ ಮೊಬೈಲ್ ನಲ್ಲಿಯೇ ಮುಳುಗಿರುತ್ತಾರೆ. ಈ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲಿ ಆಯೋಜನೆ ಮಾಡುವ ಆಹಾರ ಮೇಳ ಉತ್ತೇಜಿತವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಹೊಸ ವರ್ಷದ ಹೊಸ್ತಿಲಲ್ಲಿ ಮಕ್ಕಳಿಗೆ ಉಪಯುಕ್ತವಾಗಲಿದೆ ಎಂದು ಶನಿವಾರ ಸಕಲೇಶಪುರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಬಾಲಕಿ ಯರ ಪದವಿ ಪೂರ್ವ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಆಹಾರ ಮೇಳ ಉದ್ಘಾಟಿಸಿ ಮಾತ ನಾಡಿದರು.
ವಿದ್ಯಾರ್ಥಿಗಳು ನಮ್ಮ ಸುತ್ತಮುತ್ತ ನಡೆಯುವ ವ್ಯವಹಾರವನ್ನು ಗ್ರಹಿಸಿಕೊಂಡರೆ ಸಾಕು ಆದರೆ ಈಗಿನ ಮಕ್ಕಳು ಹೊರಗೆಲ್ಲೂ ಹೋಗದೆ ಟಾಟ ಅಜ್ಜಿಯರ ಒಡನಾಟವಿಲ್ಲದೆ ಯಾವ ವ್ಯಾವಹಾರಿಕ ಜ್ಞಾನ ಹಾಗೂ ಸಂಬಂಧಗಳ ಬೆಲೆ ತಿಳಿಯದೆ ಉಳಿದುಕೊಳ್ಳುತ್ತಿದ್ದಾರೆ. ಇಂತಹ ಕಾರ್ಯಕ್ರಮ ಮಾಡುವುದರಿಂದ ಆಹಾರ ಉತ್ಪಾದನೆ, ಬಳಕೆ ಕುರಿತು ಅರಿವು ಹೊಂದಬಹುದು. ಅನ್ನದಾತನ ಶ್ರಮದ ಅರಿವು ಮುಖ್ಯ. ಆಹಾರ ಸೇವನೆಗೆ ಮುನ್ನ ಅನ್ನದಾತನ ಶ್ರಮ ನೆನಪು ಮಾಡಿಕೊಳ್ಳ ಬೇಕು. ಈಗಾಗಲೇ ನಿತ್ಯ ಬಳಕೆ ಆಹಾರ ಪದಾರ್ಥಗಳ ಬೆಲೆ ದುಬಾರಿಯಾಗಿದೆ. ಇದು ನಮ್ಮ ಆರ್ಥಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಮಕ್ಕಳು ವಿದ್ಯೆ ಕಲಿಯುವ ಸಂದರ್ಭದಲ್ಲಿ ಆಹಾರ ಮೇಳ ಆಯೋಜನೆ ಮಾಡಿರುವುದು ಅವರಲ್ಲಿ ವ್ಯವಹಾರಿಕ ಜ್ಞಾನ ವೃದ್ಧಿಸುತ್ತದೆ. ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ’ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ರಮೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗಿದೆ. ವಿದ್ಯಾರ್ಥಿಗಳು ಒತ್ತಡದಿಂದ ಹೊರಬರಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದು ಸಲಹೆ ನೀಡಿದರು.
ಆಹಾರ ಮೇಳದಲ್ಲಿ ವಿದ್ಯಾರ್ಥಿಗಳು ತಯಾರಿಸಿ ತಂದಿದ್ದ ನೂರಾರು ಬಗೆಯ ತಿಂಡಿ ತಿನಿಸು ಗಳನ್ನು ಮಾರಾಟ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಪೋಷಕರು ಸೇರಿದಂತೆ ಮುಂತಾದವರು ಉಪಸ್ಥಿತರಿದರು.
previous post
next post