ವರದಿ ರಾಣಿ ಪ್ರಸನ್ನ
ಕಲಿಕಾರ್ಥ ಸಹಾಯ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನ
ಹಾಸನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮುಕ್ತ ಗಂಗೋತ್ರಿ, ಮೈಸೂರು, ಶಿಕ್ಷಣ ವಂಚಿತರಿಗೆ ಸಾರ್ವಜನಿಕರಿಗೆ ಹಾಗೂ ಆಸಕ್ತ ವಿದ್ಯಾರ್ಥಿಗಳಿಗೆ “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ ” ಎಂಬ ಧೈಯದೊಂದಿಗೆ ಉನ್ನತ ಶಿಕ್ಷಣವನ್ನು ದೂರ ಶಿಕ್ಷಣ ವ್ಯವಸ್ಥೆಯಲ್ಲಿ ತಾವಿರುವ ಸ್ಥಳದಲ್ಲಿ ನೀಡುವ ಉದ್ದೇಶದಿಂದ ಪ್ರಾದೇಶಿಕ ಕೇಂದ್ರ, ಹಾಸನ ಜಿಲ್ಲಾ ವ್ಯಾಪ್ತಿಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳು) ತೆರೆಯಲು ಪ್ರಥಮ ದರ್ಜೆ ಕಾಲೇಜುಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್ ಸೈಟ್ WWW.ksoumysuru.ac.in, https://ksouportal.com/reg_sc/Study Centre Registration aspx ಮೂಲಕ ಆನ್‌ಲೈನ್ನಲ್ಲಿ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರ), ಕರ್ನಾಟಕ ರಾಜ್ಯ ಮುಕ್ತ ವಿವಿ, ಮುಕ್ತಗಂಗೋತ್ರಿ, ಮೈಸೂರು-06, ವಿಳಾಸಕ್ಕೆ ಸಲ್ಲಿಸಬಹುದು. ದಿ: 18-01-2025 ರಂದು ಕೊನೆಯ ದಿನವಾಗಿರುತ್ತದೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕವಿರುವುದಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಕಲಿಕಾರ್ಥಿ ಸಹಾಯ ಕೇಂದ್ರಗಳಲ್ಲೂ ಆನ್‌ಲೈನ್ ಮೂಲಕ ಪ್ರವೇಶಾತಿ ಪಡೆಯಬಹುದು ಎಂದು ಪಿ.ಜಗದೀಶ ಕ.ರಾ.ಮು.ವಿ ಹಾಸನ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8197818807, 9482603060 ಸಂಪರ್ಕಿಸಬಹುದು.