ವರದಿ ರಾಣಿ ಪ್ರಸನ್ನ
ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ಕಿಡಿಗೇಡಿಗಳಿಂದ ಶಾಲಾ ಕಿಟಕಿ ಗಾಜು ಒಡೆದು ಹುಚ್ಚಾಟ.
ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ (ಕೆಪಿಎಸ್) ಆವರಣದಲ್ಲಿರುವ ಸಮೂಹ ಸಂಪನ್ಮೂಲ ಕೇಂದ್ರದ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದಿರುವುದಾಗಿ ಸಿ.ಆರ್.ಪಿ. ಶೋಭ ಸಿ.ಡಿ.ಯವರು ಯಸಳೂರು ಪೋಲಿಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
, ಠಾಣಾ ಸಿಬ್ಬಂದಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಚಿನ್ ಹೆಚ್.ಎಂ.,ಸಮೂಹ ಸಂಪನ್ಮೂಲ ಕೇಂದ್ರದ ಶ್ರೀಮತಿ ಶೋಭ ಸಿ.ಡಿ. ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

