ವರದಿ ರಾಣಿ ಪ್ರಸನ್ನ
ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ವಣಗೂರು ಕೂಡುರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಬೇಕು.
ವಣಗೂರು ಕೂಡು ರಸ್ತೆಯಲ್ಲಿ ಉಬ್ಬುಗಳಿಲ್ಲದೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ.
ಹೆತ್ತೂರು ಯಸಳೂರು ರಸ್ತೆಗೆ ಕೂಡುವ ಈ ರಸ್ತೆಯಲ್ಲಿ ಅಪಘಾತವಾದ ಸಂದರ್ಭದಲ್ಲಿ ಸೂಕ್ತ ಆಂಬುಲೆನ್ಸ್ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ಪ್ರವಾಸಿಗರು , ಅನಾರೋಗ್ಯ ಪೀಡಿತರು ಪರದಾಡುವಂತಾಗಿದೆ
ಅನಾರೋಗ್ಯಕ್ಕೆ ಒಳಪಟ್ಟವರಿಗೆ, ಗಾಯಾಳುಗಳಿಗೆ ಅಥವಾ ವಾಹನ ಅಪಘಾತಕ್ಕೆ ಒಳಪಟ್ಟವರಿಗೆ ದೊಡ್ಡ ಮಟ್ಟದಲ್ಲಿ ತೊಂದರೆಯಾಗುತ್ತಿದೆ. ಸ್ಥಳೀಯರು ಹಾಗೂ ಅಪಘಾತಕ್ಕೆ ಒಳಪಟ್ಟವರಿಗೆ ಸೂಕ್ತ ಸಂದರ್ಭದಲ್ಲಿ ಆಂಬುಲೆನ್ಸ್ ವ್ಯವಸ್ಥೆ ಸಿಗದೆ ಪರದಾಡುವಂತಾಗಿದೆ.
ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗು ಶಾಸಕರು ವಣಗೂರು ಕೂಡುರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

