ವರದಿ ರಾಣಿ ಪ್ರಸನ್ನ
ಸಂಸದರಾದ ಶ್ರೇಯಸ್ ಪಟೇಲ್ ಅವರನ್ನು ಭೇಟಿಯಾದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆನ್ಲಿ ಧರ್ಮರವರು ಹಾಗು ಸಕಲೇಶಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಶಬೀರ್ ರವರು, ಮತ್ತು ಆಲೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ .
ಹಾಸನ ಜಿಲ್ಲೆಯ ಸಂಸದರಾದ ಶ್ರೇಯಸ್ ಪಟೇಲ್ ರನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆನ್ಲಿ ಧರ್ಮ ರವರು, ಮತ್ತು ಸಕಲೇಶಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಶಬೀರ್ ರವರು, ಮತ್ತು ಆಲೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ರವರು, ಇಂದು ಅವರ ಮನೆಗೆ ಭೇಟಿ ನೀಡಿ ಅವರಿಗೆ ಸಿಹಿ ತಿನಿಸಿ ಮತ್ತು ಸನ್ಮಾನ ಮಾಡುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಚ್ಚಿನ ಶಕ್ತಿ ತುಂಬಬೇಕು ತಾಲೂಕಿನಾದ್ಯಂತ ಸಂಘಟನೆ ಮಾಡುವುದಕ್ಕೆ ನಿಮ್ಮ ಸಂಪೂರ್ಣ ಬೆಂಬಲ ಕೊಡಬೇಕೆಂದು ಈ ಮೂಲಕ ಕೇಳಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಭುವನಕ್ಷ ಹೆಬ್ನಳ್ಳಿ, ಮನೋಜ್ ಅಗ್ನಿ ಮಹೇಶ್ ಬೈಕೆರೆ, ಮೆಕಾನಿಕ್ ಧರ್ಮ, ಇನ್ನು ಅನೇಕ ಯುವ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

