ಆಲೂರು. ಅಂಬೇಡ್ಕರ್ ಜಯಂತಿ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಯನ್ನು ತಾಲೋಕ್ ಕಚೇರಿಯಲ್ಲಿ ಆಲೂರು ಸಕಲೇಶಪುರ ಕ್ಷೇತ್ರ ದ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಸಿಮೆಂಟ್ ಮಂಜು ಮಾತನಾಡಿ ರಾಷ್ಟ್ರ ಕಂಡ ಪ್ರತಿಮ ನಾಯಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಎಲ್ಲಾ ದಲಿತಪರ ಸಂಘಟನೆಗಳು ಮತ್ತು ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರ ಸಾಕಾರದಿಂದ ಹಾಗೂ ತಾಲೂಕು ಆಡಳಿತ ಸಹಕಾರದಿಂದ ತುಂಬಾ ವಿಜೃಂಭಣೆಯಿಂದ ಮಾಡಲು ನಿರ್ಧರಿಸಿದ್ದೇವೆ. ಹಾಗೂ ಎಲ್ಲರ ಸಲಹೆ ಸಹಕಾರಗಳನ್ನು ತೆಗೆದುಕೊಂಡಿದ್ದೇವೆ ಅವರು ಯಾವ ರೀತಿ ಹೇಳಿದ್ದಾರೆ ಅದೇ ರೀತಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಿಕೊಡುತ್ತೇವೆ ಎಂದು ಮಾತನಾಡಿದರು.
ಈ ಪೂರ್ವಭಾವಿ ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ್. ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಸಂಘ-ಸಂಸ್ಥೆಯ ಅಧ್ಯಕ್ಷರು ಉಪಾಧ್ಯಕ್ಷರು ದಲಿತ ಮುಖಂಡರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
previous post
next post