Blog

ವೀರಶೈವ ಲಿಂಗಾಯತ ಯುವ ಸೇನೆಯ 118 ನೆ ಜಯಂತಿ

ವರದಿ ರಾಣಿ ಪ್ರಸನ್ನ

ಶಿವಕುಮಾರ ಸ್ವಾಮೀಜಿಯವರು ಇಡೀ ಜೀವತಾವಧಿಯನ್ನು ಸಮಾಜಕ್ಕೆ ಮೀಸಲಿಟ್ಟರು. ಶ್ರೀಗಳು ಜಾತಿ, ಧರ್ಮ ಬೇಧ ಮರೆತು ಸಮಾಜದ ಎಲ್ಲರಿಗೂ ವಿದ್ಯೆ ನೀಡಿದವರು ಎಂದು ಮಂಗಳವಾರ ತಾಲೂಕಿನ ಬಾಗೆ ಗ್ರಾಮದಲ್ಲಿ ವೀರಶೈವ ಲಿಂಗಾಯತ ಯುವ ಸೇನೆ ವತಿಯಿಂದ ಏರ್ಪಡಿಸಿದ್ದ ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತಿ ಮತ್ತು ಗುರುವಂದನ ಕಾರ್ಯಕ್ರಮದಲ್ಲಿ ಮಾತನಾಡಿದ  ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.

ಇವರು ದಾಸೋಹದ ಮೂಲಕ ದೇಶದಲ್ಲಿ ಬಸವ ತತ್ವ ಭಿತ್ತಿ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಿಸುವಂತಹ ಸಾಧನೆ ಮಾಡಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಮನುಕುಲಕ್ಕೆ ಮಾದರಿ. ಅನ್ನ, ವಸತಿ, ಶಿಕ್ಷಣಕ್ಕೆ ಒತ್ತು ಕೊಟ್ಟು ಸ್ವಸ್ಥ ಸಮಾಜಕ್ಕೆ ಬುನಾದಿ ಹಾಕಿದರು’ ಎಂದು ಸ್ಮರಿಸಿದರು.12ನೇ ಶತಮಾನದಲ್ಲಿ ಬಸವಣ್ಣರು ಸಾಮಾಜಿಕ ಕ್ರಾಂತಿ ಮಾಡಿದ ರೀತಿಯಲ್ಲಿ ಅಕ್ಷರ ಕ್ರಾಂತಿಗಾಗಿ ಬದುಕನ್ನೇ ಮುಡುಪಾಗಿಟ್ಟ ಶಿವಕುಮಾರ ಸ್ವಾಮೀಜಿಗಳು ಎಂದೆಂದಿಗೂ ಅಮರ. ಸಿದ್ಧಗಂಗಾ ಮಠದಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳು ದೇಶ ವಿದೇಶದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ’ ಎಂದು ತಿಳಿಸಿದರು.

ನಂತರ  ಕಾರ್ಯಕ್ರಮದಲ್ಲಿ ಮಾತನಾಡಿದ ತ್ರಿವಿಧ ದಾಸೋಹಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ಮರಿಸುತ್ತ, ತೆಂಕಲಗೂಡು ಬೃಹನ್ ಮಠದ  ಶ್ರೀ ಗಳಾದ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ‘ಸ್ವಾಮೀಜಿಯು ಶಿಕ್ಷಣದ ಮಹತ್ವ ತಿಳಿದು ರಾಜ್ಯದಲ್ಲಿ ಅಕ್ಷರ ಕ್ರಾಂತಿ ಮಾಡಿದರು. ಸರಳ ಸಜ್ಜನಿಕೆಯ ಅವರು ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಕೊಡುಗೆ ನೀಡಿದ್ದಾರೆ. ಜಾತ್ಯಾತೀತ ತತ್ವ ಮೈಗೂಡಿಸಿಕೊಂಡಿದ್ದ ಶ್ರೀಗಳು ನಿಜಕ್ಕೂ ಪವಾಡ ಪುರುಷರು. ಬಸವಣ್ಣರ ತತ್ವಾದರ್ಶ ಕಾರ್ಯರೂಪಕ್ಕೆ ತಂದ ಅಪರೂಪದ ತಪಸ್ವಿ’ ಎಂದು  ಹೇಳಿದರು.

ಈ ಸಂಧರ್ಭದಲ್ಲಿ ಸಂಕಲಾಪುರ ಮಠದ ಪೀಠಾಧ್ಯಕ್ಷರಾದ ಧರ್ಮರಾಜೇಂದ್ರ ಮಹಾಸ್ವಾಮಿಗಳು  ದಿವ್ಯ ಸಾನಿಧ್ಯ ವಹಿಸಿದ್ದರು.

ವೀರಶೈವ ಲಿಂಗಾಯತ ಯುವ ಸೇನೆಯ ಬೆಳಗೋಡು ಹೋಬಳಿ ಅಧ್ಯಕ್ಷ ನಾಗೇಂದ್ರ, ತಾಲೂಕು ಅಧ್ಯಕ್ಷ ಸಾಗರ್ ಜಾನೇಕೆರೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಗೋಪಿನಾಥ್, ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ನೇತ್ರಾವತಿ ಮಂಜುನಾಥ್ , ಬಿಜೆಪಿ ಮುಖಂಡ ಕಟ್ಟೆಗದ್ದೆ ನಾಗರಾಜ್,  ಪ್ರಕಾಶ್ ದೊಡ್ಡ ದಿಣ್ಣೆ, ಬಾಗೆ ಆನಂದ್, ಸೇರಿದಂತೆ ಸಂಘಟನೆಯ ತಾಲೂಕು, ಹೋಬಳಿ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಬುಧವಾರ ವಿದ್ಯುತ್ ಇಲ್ಲ

Bimba Prakashana

ಜಮೀರ್ ಅಹ್ಮದ್ ವಿರುದ್ಧ ಜೆಡಿಎಸ್ ನಿಂದ ಪ್ರತಿಭಟನೆ

Bimba Prakashana

ರಂಗೋಲಿ ಹಾಗೂ ತೋಟ ನಿರ್ವಹಣೆ ಸ್ಪರ್ಧೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More