ವರದಿ ರಾಣಿ ಪ್ರಸನ್ನ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯ ಗಳಿಂದ ರಾಜ್ಯ ವಂಚಿತ ವಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದ್ದಾರೆ.
ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಬಾಳ್ಳುಪೇಟೆಯಿಂದ ಜಮ್ಮನಹಳ್ಳಿ (ಹೊಸಕೋಟೆ ಮಾರ್ಗ) – 10 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕುನ್ನಿಗನಹಳ್ಳಿ ಪಂಚಾಯಿತಿ ಜಮ್ಮನಹಳ್ಳಿ ಗ್ರಾಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯ ಹೆದ್ದಾರಿ-112ರ ಬಾಳ್ಳುಪೇಟೆ- ಜಮ್ಮನಹಳ್ಳಿ (ಕೆ.ಹೊಸ ಕೋಟೆ )ನೂತನ ರಸ್ತೆ ಕಾಮಗಾರಿಗೆ ಶನಿವಾರ ಬಾಳ್ಳುಪೇಟೆ ಮುಖ್ಯ ವೃತ್ತದಲ್ಲಿ ಭೂಮಿ ಪೂಜೆ ನಡೆಸಿ ಮಾತನಾಡಿ, ಸುಮಾರು 10 ಕೋಟಿ ರೂ. ವೆಚ್ಚದಲ್ಲಿ 3 ಕಿ.ಮೀ. ರಸ್ತೆಯನ್ನು ಈಗಿರುವ 57 ಮೀಟರ್ ನೂತನ ವಿಸ್ತರಣೆಯಾಗಲಿದೆ.
ರಸ್ತೆಯಿಂದ ಎರಡು ಬದಿಯಲ್ಲಿ ವಾಹನ ಸಂಚಾರ ಸುಗಮವಾಗಲಿದೆ ಎಂದು ಹೇಳಿದರು. ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ರಸ್ತೆ ನಿರ್ಮಿಸಲಾಗುತ್ತಿದೆ. ಈ ರಸ್ತೆಯು ಬೇಲೂರು, ಕೊಡ್ಲಿಪೇಟೆ ಹಾಗೂ ಮಡಿಕೇರಿ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ.
ಈ ರಸ್ತೆ ಬಹಳ ವರ್ಷಗಳಿಂದ ಹೊಂಡ ಬಿದ್ದು ಅಭಿವೃದ್ಧಿ ಕಾಣದೆ ಹಾಳಾಗಿತ್ತು. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗಿತ್ತು ಎಂದು ಹೇಳಿದರು. ಇದರ ದುರಸ್ತಿಗೆ ಸಾರ್ವಜನಿಕರ ಒತ್ತಡವೂ ಹೆಚ್ಚಾಗಿತ್ತು. ಈ ಕಾರಣದಿಂದ ಜನತೆ ಬೇಡಿಕೆ ಅನುಗುಣವಾಗಿ ಮಳೆಗಾಲ ಆರಂಭವಾಗುವ ಮುನ್ನ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರವಹಿಸಬೇಕು ಎಂದು ಹೇಳಿದರು. ಸಂಪೂರ್ಣವಾಗಿ ಬಳಕೆಗೊಂಡು ಸುಸಜ್ಜಿತ ರಸ್ತೆ ನಿರ್ಮಾಣಗೊಳ್ಳಲಿದೆ.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
previous post
next post