ವರದಿ ರಾಣಿ ಪ್ರಸನ್ನ
ನಾಳೆ ದ್ವಿತೀಯ ಪಿಯು ಫಲಿತಾಂಶ
ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಅಧ್ಯಕ್ಷರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.
ನಾಳೆ ಮಧ್ಯಾಹ್ನ 1.30ರ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ರಾಜ್ಯಾದ್ಯಂತ ಮಾರ್ಚ್ 1ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು.
ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬಳಿಕ ಈ ಕೆಳಗಿನ ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ನಂತರ ಅಂಕಪಟ್ಟಿಯನ್ನು ಡೌನ್‌ಲೋಡ್ ಕೂಡ ಮಾಡಿಕೊಳ್ಳಬಹುದಾಗಿದೆ.
ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.– ಹೋಂ ಪೇಜ್‌ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.– ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.– Second PU Results 2025 ಎಂಬುದು ಸ್ಕ್ರೀನ್‌ನಲ್ಲಿ ಕಾಣಿಸುತ್ತದೆ.